Site icon Samastha News

Bengaluru: ಮಾವಿನ ಹಣ್ಣು ರಪ್ತಿನಲ್ಲಿ ದಾಖಲೆ ಬರೆದ ಕೆಂಪೇಗೌಡ ವಿಮಾನ ನಿಲ್ದಾಣ

Bengaluru

Bengaluru

ಏಷ್ಯಾದ ಅತ್ಯುತ್ತಮ‌ ವಿಮಾನ‌ ನಿಲ್ದಾಣಗಳಲ್ಲಿ ಒಂದಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2024ನೇ ಸಾಲಿನಲ್ಲಿ ಹೊಸ ದಾಖಲೆಯೊಂದಕ್ಕೆ ಕಾರಣವಾಗಿದೆ. ಈ ಸಾಲಿನಲ್ಲಿ 822 ಮೆಟ್ರಿಕ್ ಟನ್‌ ಮಾವಿನ ಹಣ್ಣಿನ ಸಾಗಾಟಣೆ ಮಾಡುವ ಮೂಲಕ ದಾಖಲೆ ಬರೆದಿದೆ. ಕಳೆ ವರ್ಷ 685 ಎಟ್ರಿಕ್‌ ಟನ್‌ ಮಾವಿನಹಣ್ಣನ್ನು ರಫ್ತು ಮಾಡಿದ್ದು ಈ ಬಾರಿ ಒಟ್ಟು 27 ಲಕ್ಷ ಮಾವಿನ ಹಣ್ಣನ್ನು ರಫ್ತು ಮಾಡುವ ಮೂಲಕ ಹಿಂದಿನ ಋತುವಿಗೆ ಹೋಲಿಸಿದರೆ ಶೇ.59ರಷ್ಟು ಹೆಚ್ಚಳ ಕಂಡಿದೆ.

ವಿದೇಶದ ಮಾರುಕಟ್ಟೆಯಲ್ಲಿ ಭಾರತೀಯ ಮಾವಿನ ಹಣ್ಣಿನ ಬೇಡಿಕೆ ಹೆಚ್ಚಿದ್ದು ಪೆರಿಷಬಲ್‌ ಸರಕುಗಳನ್ನು ರಫ್ತು ಮಾಡುವಲ್ಲಿ BLR ವಿಮಾನ ನಿಲ್ದಾಣದ ಕಾರ್ಯಾಚರಣೆಯ  ರಫ್ತು ಪ್ರಮಾಣದಲ್ಲಿ ಏರಿಕೆ ಕಂಡಿದೆ. ಈ ಋತುವಿನಲ್ಲಿ ಅಮೆರಿಕಕ್ಕೆ ಹೆಚ್ಚು ಮಾವಿನ ಹಣ್ಣುಗಳನ್ನು ರಫ್ತು ಮಾಡಲಾಗಿದೆ. ಪ್ರಮುಖವಾಗಿ ವಾಷಿಂಗ್ಟನ್, ಡಲ್ಲಾಸ್ (ಐಎಡಿ), ಡಲ್ಲಾಸ್-ಫೋರ್ಟ್ ವರ್ತ್ (ಡಿಎಫ್‌ಡಬ್ಲ್ಯೂ), ಮತ್ತು ಸ್ಯಾನ್ ಫ್ರಾನ್ಸಿಸ್ಕೊ (ಎಸ್‌ಎಫ್‌ಒ) ನಂತಹ ವಿಮಾನ ನಿಲ್ದಾಣಗಳಿಗೆ ಅತಿ ಹೆಚ್ಚು ಮಾವಿನ ಹಣ್ಣು ರಫ್ತು ಮಾಡಲಾಗಿದೆ. ಇದರ ಜೊತೆಗೆ, ಶಿಕಾಗೋ (ಒಆರ್‌ಡಿ), ಸಿಯಾಟಲ್ (ಸಿಇಎ), ದುಬೈ (ಡಿಎಕ್ಸ್‌ಬಿ), ಲಂಡನ್ (ಎಲ್‌ಎಚ್‌ಆರ್‌), ಮತ್ತು ಹ್ಯೂಸ್ಟನ್ (ಐಎಎಚ್‌) ನಂತಹ ಪ್ರಮುಖ ವಿಮಾನ ನಿಲ್ದಾಣಗಳು ಸೇರಿದಂತೆ 60 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಥಳಗಳಿಗೆ ಬೆಂಗಳೂರಿನಿಂದ ಮಾವಿನ ಹಣ್ಣು ರಫ್ತಾಗಿದೆ.

Zomato Founder: ಕೆಲವೇ ಗಂಟೆಗಳಲ್ಲಿ 1600 ಕೋಟಿ ಗಳಿಸಿದ ಈ ಉದ್ಯಮಿ

“ಬೆಂಗಳೂರು ಏರ್‌ಪೋರ್ಟ್‌ ನಲ್ಲಿ ತಾಂತ್ರಿಕ ವಾಗಿ ಉತ್ತಮವಾದ ಶೀಥಲೀಕರಣ ಸೌಲಭ್ಯವಾದ ಡಬ್ಲ್ಯುಎಫ್‌ಎಸ್  ಬಿಎಲ್‌ಆರ್ ಕೂಲ್‌ಪೋರ್ಟ್ ಪೂರೈಕೆಯು ಪೆರಿಷೆಬಲ್‌ ಉತ್ಪನ್ನಗಳ ಗುಣಮಟ್ಟವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಮಾವಿನ ರಫ್ತುಗಳನ್ನು ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚಿಸುವ ಈ ಸಾಧನೆಯು ಭಾರತೀಯ ಮಾವಿನಹಣ್ಣಿಗೆ, ಮಾವು ಬೆಳೆಗಾರರಿಗೆ ಸಲ್ಲಬೇಕಿದೆ ಎಂದಿದ್ದಾರೆ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್.

ಕೆಂಪೆಗೌಡ ವಿಮಾನ‌ನಿಲ್ದಾಣವು ಜಾಗತಿಕ ಮಟ್ಟದಲ್ಲಿ ಕೆಲವು ಪ್ರಮುಖ ಪ್ರದೇಶಗಳಿಗೆ ವಸ್ತುಗಳನ್ನು ರಫ್ತು ಮಾಡುವಲ್ಲಿ ನಿರ್ಣಾಯಕ ಸ್ಥಾನವನ್ನು ಹೊಂದಿದ್ದು, ಸ್ಥಾನವನ್ನು ಹಿಂದೆಂದಿಗಿಂತಲೂ ಬಲಪಡಿಸಿಕೊಂಡಿದೆ ಎಂದಿದ್ದಾರೆ ಅವರು.

Exit mobile version