CM Siddaramaiah: ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

0
125
CM Siddaramaiah instruct officers to be get ready with data while assembly session
C M Siddaramaiah

CM Siddaramaiah

ವಾಲ್ಮಿಕಿ ಹಗರಣ, ಮುಡಾ ಹಗರಣ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿರುವ ಹೊತ್ತಿನಲ್ಲೆಯೇ ನಾಳೆಯಿಂದ (ಜುಲೈ 14) ವಿಧಾನಮಂಡಲ ಅಧಿವೇಶನ ಪ್ರಾರಂಭ ಆಗಲಿದೆ. ಹಗರಣದ ವಿಷಯ ಸದನದಲ್ಲಿ ಜೋರಾಗಿ ಚರ್ಚೆ ಆಗಲಿದೆ. ಈ ಬಾರಿ ವಿಪಕ್ಷವು ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತು ಮಾಹಿತಿ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಜುಲೈ 14) ಎಲ್ಲ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿದ ಸಿಎಂ ಅಧಿವೇಶನದ ಜೊತೆಗೆ ಬೇರೆ ಕೆಲವು ವಿಷಯಗಳ ಬಗ್ಗೆಯೂ ಚರ್ಚೆ ನಡೆಸಿ, ಸೂಚನೆಗಳನ್ನು ನೀಡಿದರು.

ಈ ಬಾರಿ ಸಂಪೂರ್ಣ ಬಜೆಟ್‌ಗೆ ಮಾರ್ಚ್‌ ನಲ್ಲಿಯೇ ಅನುಮೋದನೆ ದೊರೆತಿರುವ ಕಾರಣ ಇದು ಬಜೆಟ್‌ ಬಗ್ಗೆ ಚರ್ಚಿಸುವ ಅಧಿವೇಶನ ಅಲ್ಲ. ಯಾವಗಲೂ ಮಾರ್ಚ್‌ ನಲ್ಲಿ ಲೇಖಾನುದಾನ ಪಡೆದು, ಮಳೆಗಾಲದ ಅಧಿವೇಶನದಲ್ಲಿ ಪೂರ್ಣ ಬಜೆಟ್‌ ಗೆ ಅನುಮೋದನೆ ಪಡೆಯಲಾಗುತ್ತಿತ್ತು. ಈ ಬಾರಿ ಪೂರ್ಣ ಬಜೆಟ್‌ ಅನುಮೋದನೆ ಆಗಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದವರು ಈ ಬಾರಿಯ ಸಂಪೂರ್ಣ ಅಧಿವೇಶನವನ್ನು ವಿವಿಧ ಆರೋಪ ಮಾಡುವ ಕುರಿತು ಬಳಸಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಸೂಕ್ತ ಉತ್ತರ ನೀಡಲು ಅಧಿಕಾರಿಗಳು ಸಿದ್ಧರಾಗಿರಬೇಕು ಎಂದು ಸೂಚಿಸಿದರು.

ಮಂಡ್ಯ ಜನರಿಗೆ ಭರ್ಜರಿ ಬಾಡೂಟ ಹಾಕಿಸಿದ ಕುಮಾರಸ್ವಾಮಿ, ಮಾಡಿಸಿದ್ದ ಅಡುಗೆಗಳು ಏನೇನು?

ಸಭೆಯಲ್ಲಿ ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖೆಯ ಕಾರ್ಯದರ್ಶಿಗಳಿಂದ ಸಿಎಂ ಅವರು ಮಾಹಿತಿ ಪಡೆದರು. ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ತಯಾರು ಇಟ್ಟಿರುವಂತೆ ಸೂಚನೆ ನೀಡಿದರು. ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಸಿದ್ದರಾಮಯ್ಯ ಸೂಚಿಸಿದರು. ಅಧಿವೇಶನದಲ್ಲಿ ಭಾಗವಹಿಸಿರುವ ಸಚಿವರಿಗೆ ಸಮರ್ಪಕವಾಗಿ ಹಾಗೂ ವೇಗವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ ಎಂದು ತಿಳಿಸಿದರು.

ನಿಮ್ಮ ಇಲಾಖೆಯ ವಿಷಯ ಇದ್ದಾಗ ಕಾರ್ಯದರ್ಶಿಗಳು ಖುದ್ದು ಹಾಜರಿದ್ದು, ಸಚಿವರಿಗೆ ಸಹಕಾರ ನೀಡಬೇಕು. ಕೇವಲ ಅಧೀನ ಅಧಿಕಾರಿಗಳನ್ನು ಕಳುಹಿಸಿ ಗೈರು ಹಾಜರಾಗುವಂತಿಲ್ಲ ಎಂದು ಸೂಚನೆ ನೀಡಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here