CM Siddaramaiah
ರಾಜ್ಯದ ಹಲೆವೆಡೆ ಭೀಕರ ಮಳೆಯಿಂದ ನೆರೆ ಪರಿಸ್ಥಿತಿ ಉಂಟಾಗಿದೆ. ಹಲವೆಡೆ ಗುಡ್ಡ ಕುಸಿತ ಉಂಟಾಗಿದು ಹಲವಾರು ಮನೆ ನಾಶಗೊಂಡಿವೆ. ಜೀವ ಹಾನಿಯೂ ಆಗಿದೆ. SDRF ಮತ್ತು NDRF ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಇತರೆ ಕೆಲವು ಮಂತ್ರಿಗಳು, ಶಾಸಕರು ಇಂದು ಶಿರೂರು, ಅಂಕೋಲ ಸೇರಿದಂತೆ ಇನ್ನೂ ಕೆಲವು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎಸ್ಡಿಆರ್ಎಫ್-ಎನ್ಡಿಆರ್ಎಫ್ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.
ಗುಡ್ಡ ಕುಸಿತದಿಂದ ರಸ್ತೆಗಳು ಮುಚ್ಚಿಹೋಗಿವೆ. ಎಡಭಾಗದಲ್ಲಿ ಕುಸಿದು ಹೋಗಿರುವ ಗುಡ್ಡ, ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ ಇಂಥಹಾ ಸವಾಲಿನ ಪರಿಸ್ಥಿತಿಯಲ್ಲಿಯೂ ಸಹ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಸಿಬ್ಬಂದಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಅಂಥಹಾ ಕಾರ್ಯ ಮಾಡುತ್ತಿರುವ ಸಿಬ್ಬಂದಿಯ ಶ್ರಮ ಮೆಚ್ಚುಗೆ ಅರ್ಹವಾಗಿದೆ ಎಂದಿದ್ದಾರೆ ಸಿಎಂ ಸಿದ್ದರಮಯ್ಯ.
ವೀಕ್ಷಣೆ ಸಮಯದಲ್ಲಿ ಸಿಎಂ ಜೊತೆಗಿದ್ದ ಸಚಿವ ಕೃಷ್ಣಬೈರೇಗೌಡ, ‘ಗುಡ್ಡ ಕುಸಿತದ ಕೆಳಗೆ ನಾಲ್ಕು ಕುಟುಂಬಗಳು ಸಿಲುಕಿರಬಹುದೆಂಬ ಅನುಮಾನ ಇದೆ. ಅವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದೆ. ಕಾರ್ಯಾಚರಣೆ ನಡೆಸುತ್ತಿದ್ದೇವೆ, ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಮಳೆ ಹೆಚ್ಚಾದಾಗಿನಿಂದಲೂ ಕಂದಾಯ ಸಚಿವ ಕೃಷ್ಣಬೈರೇಗೌಡರು ನೆರೆ ಪೀಡಿತ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.
Youtuber: ಅತಿಯಾದ ಊಟ ಸೇವನೆಯಿಂದ ಮರಣಹೊಂದಿದೆ ಯೂಟ್ಯೂಬರ್
ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಯೂ ಇದೆ ಎಂಬುದನ್ನು ಅಧಿಕಾರಿಗಳು ಸಿದ್ದರಾಮಯ್ಯಗೆ ತಿಳಿಸಿದರು. ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಜಾಗರೂಕತರೆಯಿಂದ ಕಾರ್ಯಾಚರಣೆ ನಡೆಸಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.
ಸಿಎಂ ಸಿದ್ದರಾಮಯ್ಯ ಅವರು ನೆರೆ ವೀಕ್ಷಣೆಗೆ ಹೋದಲ್ಲೆಲ್ಲ ಕಿಕ್ಕಿರಿದು ಪತ್ರಕರ್ತರು ತುಂಬಿದ್ದರು. ಭೀಕರ ಮಳೆಯ ನಡುವೆಯೂ ಕಾರ್ಯ ನಿರ್ವಹಿಸುತ್ತಿದ್ದ ಪತ್ರಕರ್ತರು ಮತ್ತು ಕ್ಯಾಮೆರಾಮನ್ಗಳನ್ನು ಗಮಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಪತ್ರಕರ್ತರಿಗೆಲ್ಲಾ ರೇನ್ ಕೋಟ್ ಮತ್ತು ರಬ್ಬರ್ ಶೂ ಕೊಟ್ಟಿದ್ದೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಆದರೆ ಆ ರೀತಿಯ ಯಾವುದೇ ವ್ಯವಸ್ಥೆ ಮಾಡದಿದ್ದ ಅಧಿಕಾರಿಗಳು ಉತ್ತರ ನೀಡಲಾಗದೆ ತಬ್ಬಿಬ್ಬಾದರು.