Site icon Samastha News

B. S. Yediyurappa: ‘ಯಡಿಯೂರಪ್ಪ ಪ್ರಕರಣಕ್ಕೆ ಮರುಜೀವ ಕೊಟ್ಟಿದ್ಯಾರು?’

B. S. Yediyurappa

B. S. Yediyurappa

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರೆಂಟ್ ಹೊರಡಿಸಲಾಗಿತ್ತು. ಆದರೆ ಹೈಕೋರ್ಟ್ ಆದೇಶದ ಮೇರೆಗೆ ಅವರ ಬಂಧನಕ್ಕೆ ತಡೆ ಬಿದ್ದಿದೆ. ತಿಂಗಳುಗಳ ಹಿಂದೆ ದೂರು ನೊಂದಣಿ ಆಗಿ, ಪ್ರಕರಣದ ಬಗ್ಗೆ ಬ-ರಿಪೋರ್ಟ್ ಸಹ ಸಲ್ಲಿಕೆ ಆದ ಪ್ರಕರಣಕ್ಕೆ ಮರುಜೀವ ಸಿಗುವಂತೆ ಮಾಡಿದ್ಯಾರು ಎಂದು ಇದೀಗ ರಾಜ್ಯ ಬಿಜೆಪಿ ಮುಖಂಡರು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಧಾನಪರಿಷತ್ ಸದಸ್ಯ ಸಿಟಿ ರವಿ, ‘ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಆ ಥರ ಏನೂ ನಡೆದಿಲ್ಲ ಎಂದು ಪೊಲೀಸರು ತಿಳಿಸಿ, ಬಿ ರಿಪೋರ್ಟ್ ಹಾಕುವ ಹಂತದಲ್ಲಿರುವಾಗ ಏಕಾಏಕಿ ಈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ‘ರಾಜಕೀಯ ಕಾರಣಕ್ಕೆ ಈ ಪ್ರಕರಣವನ್ನು ಬಳಸುವ ಪ್ರಯತ್ನ ಮಾಡುತ್ತಿರುವ ಅನುಮಾನ ಇದೆ. ಇಲ್ಲದೇ ಇದ್ದರೆ 3 ತಿಂಗಳ ಹಿಂದೆಯೇ ತಣ್ಣಗಾಗಿದ್ದ ಪ್ರಕರಣ ಈಗ ಏಕೆ ಮುನ್ನಲೆಗೆ ಬಂತು? ಈ ಪ್ರಕರಣಕ್ಕೆ ಮರುಜೀವ ಕೊಟ್ಟಿದ್ದು ಯಾರು? ದೂರುದಾರೆಯು ಈ ರೀತಿಯ 50ಕ್ಕೂ ಹೆಚ್ಚು ಗಣ್ಯರ ಮೇಲೆ ದೂರು ನೀಡಿದ್ದರು ಎಂದು ಗೃಹ ಸಚಿವರು ಸಾರ್ವಜನಿಕವಾಗಿ ಹೇಳಿದ್ದರು ಎಂದು ಅವರು ಹೇಳಿದ್ದಾರೆ.

‘ಈ ದೂರಿಗೆ ಸಂಬಂಧಿಸಿದಂತೆ ಸರಕಾರದ ನಡೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮಾರ್ಚ್ 14ರಂದು ಅವರ ಮೇಲೆ ದೂರು ದಾಖಲಾಗಿತ್ತು. ಫೆಬ್ರವರಿ 2ರಂದು ಈ ಪ್ರಕರಣ ನಡೆದುದಾಗಿ ಆರೋಪ ಮಾಡಲಾಗಿದೆ. ಯಡಿಯೂರಪ್ಪ ಅವರು ಸಿಐಡಿ ಮುಂದೆ ಏಪ್ರಿಲ್ 12ರಂದು ಹಾಜರಾಗಿ ಹೇಳಿಕೆಯನ್ನೂ ನೀಡಿದ್ದರು. ಈಗ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಯಡಿಯೂರಪ್ಪ ಮೇಲಿನ ಮೊಕದ್ದಮೆಯನ್ನು ರಾಜ್ಯದ ಕಾಂಗ್ರೆಸ್ ಸರಕಾರವು ರಾಜಕೀಯದ ದೃಷ್ಟಿಯಿಂದ ನೋಡುತ್ತಿದೆ’ ಎಂದು ಸಿಟಿ ರವಿ ಆರೋಪಿಸಿದರು.

https://samasthanews.com/minister-dinesh-gundurao-gave-instruction-to-build-254-new-namma-clinic-hospitals/

ಒಬ್ಬ ಪ್ರಭಾವಿ ಸಚಿವರು ಈ ಪ್ರಕರಣ ಜೀವ ಪಡೆಯಲು ಕಾರಣರಾಗಿದ್ದಾರೆ ಎಂಬ ಮಾಹಿತಿ ಕೂಡ ಅಧಿಕಾರಿಗಳ ಮೂಲಕ ಬಂದಿದೆ. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಲು ನಮ್ಮ ಅಡ್ಡಿ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ದುರುದ್ದೇಶದಿಂದ ಹೀಗೆ ಮಾಡಿದರೆ ಅದರ ಪರಿಣಾಮ ನಿಮಗೆ ತಿರುಗುಬಾಣ ಆಗಲಿದೆ ಎಂದು ಎಚ್ಚರಿಸಿದರು. ಇದರ ಪರಿಣಾಮವಾಗಿ ರಾಜಕೀಯ ಲಾಭ ಆಗದು; ರಾಜಕೀಯ ನಷ್ಟ ಆಗಲಿದೆ ಎಂದೂ ತಿಳಿಸಿದರು. ತಪ್ಪು ಮಾಡಿದರೆ ಭಯಪಡಬೇಕು. ತಪ್ಪೇ ಇಲ್ಲದಿದ್ದರೆ ಭಯ ಯಾಕೆ? ಎಂದಿದ್ದಾರೆ.

ಗೃಹ ಸಚಿವರು ಈ ಹಿಂದೆ ನೀಡಿದ್ದ ಹೇಳಿಕೆಗೂ ಈಗ ನೀಡುತ್ತಿರುವ ಹೇಳಿಕೆಗೂ ವ್ಯತ್ಯಾಸವಿದೆ. ಅಂದು ಅವರು ದೂರುದಾರೆಯ ಮಾನಸಿಕ ಸ್ಥಿಮಿತದ ಬಗ್ಗೆ ಮಾತನಾಡಿದ್ದರು. ಆದರೆ ಇಂದು ಅಗತ್ಯ ಇದ್ದರೆ ಬಂಧಿಸುತ್ತೇವೆ ಎಂದಿದ್ದಾರೆ. ಸರಕಾರದ ನಿಲುವು ಬದಲಾಗಲು ಕಾರಣ ಏನು? ಲೋಕಸಭಾ ಚುನಾವಣೆಯ ಸೋಲು ಕಾರಣವೇ? ಮಾನ್ಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ತವರು ಜಿಲ್ಲೆಯಲ್ಲೇ ಸೋತಿದ್ದು ಒಂದು ಕಾರಣ ಇರಬಹುದೇ? ಉಪ ಮುಖ್ಯಮಂತ್ರಿಯವರ ಸೋದರನ ಸೋಲಿನ ಆಘಾತ ಈ ರೀತಿ ನಿಲುವು ಬದಲಾಗಲು ಕಾರಣವೇ? ಎಂದು ಸಿ.ಟಿ.ರವಿ ಅವರು ಪ್ರಶ್ನಿಸಿದರು.

‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿಯ ಹಗರಣ, ಅದರಿಂದ ಆಗಿರುವ ಮುಖಭಂಗ, ಆ ಲೂಟಿಯನ್ನು ಮುಚ್ಚಿ ಹಾಕಲು ಸಂಚು ನಡೆದಿದ್ದು, ಬಿಜೆಪಿ ಅದನ್ನು ಬಯಲಿಗೆ ಎಳೆದಿದೆ. ಅದರಿಂದ ಸಚಿವ ರಾಜೀನಾಮೆ ಕೊಡಲು ಕಾರಣವಾಗಿದೆ. ಈ ಹತಾಶೆಯಿಂದ ಹೀಗೆ ಮಾಡುತ್ತಿರಬಹುದೇ? ರಾಹುಲ್ ಗಾಂಧಿ, ಸುರ್ಜೇವಾಲಾ ಒತ್ತಡ ಇದರ ಹಿಂದೆ ಇದೆಯೇ ಎಂದು ಅವರು ಪ್ರಶ್ನೆ ಮಾಡಿದರು.

ನಮ್ಮ ಮೇಲಿನ ಒಂದು ಸುಳ್ಳು ಆರೋಪ ಸಂಬಂಧಿತ ಕೇಸಿಗೆ ಸಿಎಂ, ಡಿಸಿಎಂ ಸೇರಿದಂತೆ ರಾಹುಲ್ ಗಾಂಧಿಯವರು ನ್ಯಾಯಾಲಯದ ಕಟಕಟೆಗೆ ಬಂದು ನಿಲ್ಲಬೇಕಾಯಿತು. ಶೇ 40 ಆರೋಪ ಸಾಬೀತು ಮಾಡಲು ಅವರಿಂದ ಅಸಾಧ್ಯ. ಅವರಿಗೆ ಶಿಕ್ಷೆ ಆಗುವ ಸಾಧ್ಯತೆಯೂ ಇದೆ. ಬಹುಶಃ ಆ ಕಾರಣಕ್ಕಾಗಿ ಹತಾಶೆಯಿಂದ ಯಡಿಯೂರಪ್ಪನವರ ಮೇಲೆ ರಾಜಕೀಯ ದುರುದ್ದೇಶದಿಂದ ಸೇಡು ತೀರಿಸಿಕೊಳ್ಳಬೇಕು ಅಥವಾ ಮಾನಸಿಕವಾಗಿ ಕುಗ್ಗಿಸಬೇಕೆಂದು ಈ ಸಂಚು ಮಾಡಿದ್ದಾರೇನೋ ಎಂದು ಅನಿಸಿಕೆ ವ್ಯಕ್ತಪಡಿಸಿದರು.

Exit mobile version