Site icon Samastha News

Darshan: ದರ್ಶನ್​ಗೆ ಸಿಗಲಿಲ್ಲ ಜಾಮೀನು: ನ್ಯಾಯಾಲಯದಲ್ಲಿ ಇಂದು ಏನೇನಾಯ್ತು?

Darshan

Darshan

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್, ಪವಿತ್ರಾ ಗೌಡ, ವಿನಯ್, ಪ್ರದೋಶ್ ಸೇರಿದಂತೆ ಒಟ್ಟು 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಜುಲೈ 4ಕ್ಕೆ ಪೂರ್ಣವಾದ ಬೆನ್ನಲ್ಲೆ ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯ್ತು. ಈ ವೇಳೆ ದರ್ಶನ್ ಸೇರಿದಂತೆ ಬಂಧಿತ ಎಲ್ಲ ಆರೋಪಿಗಳ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಣೆ ಮಾಡಲಾಯ್ತು. ಜುಲೈ 18ರ ವರೆಗೆ ದರ್ಶನ್ ಹಾಗೂ ಇತರ ಆರೋಪಿಗಳು ಜೈಲಿನಲ್ಲೇ ಕಾಲ ಕಳೆಯಬೇಕಿದೆ.

ದರ್ಶನ್ ಸೇರಿದಂತೆ ಯಾವುದೇ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆದರೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ತುಮಕೂರಿನಲ್ಲಿ ಕೆಲವು ಆರೋಪಿಗಳನ್ನು ಇರಿಸಲಾಗಿದ್ದು ಅವರೂ ಸಹ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿದ್ದರು. ಇಂದು ನ್ಯಾಯಾಲಯಕ್ಕೆ ಹೆಚ್ಚಿನ ವಾದ ವಿವಾದಗಳು ನಡೆಯಲಿಲ್ಲವಾದರೂ, ಆರೋಪಿಗಳಿಗೆ ಜಾಮೀನು ನೀಡದೇ ಇರಲು ಪೊಲೀಸರು ಕೆಲವು ಮಾಹಿತಿಗಳನ್ನು ನ್ಯಾಯಾಲಯಕ್ಕೆ ಒದಗಿಸಿದ್ದರು. ಅದರ ಮಾಹಿತಿ ಇಲ್ಲಿದೆ.

ಪ್ರಕರಣದ ಎ1 ರಿಂದ ಎ17 ಆರೋಪಿಗಳು ಕೊಲೆ ಅಪರಾಧ ಮತ್ತು ಕೊಲೆಯ ಸಾಕ್ಷಿಯನ್ನು ನಾಶ ಮಾಡಿರುವ ಗಂಭೀರ ಅಪರಾಧದಲ್ಲಿ ಭಾಗಿಯಾಗಿ ಕೃತ್ಯ ಎಸಗಿದ್ದಾರೆ. ಈವರೆಗೆ ಸಂಗ್ರಹಿಸಿರುವ ಸಾಕ್ಷ್ಯಗಳು ಹಾಗೂ ಹೇಳಿಕೆಗಳನ್ನು ಗಮನಿಸಿದರೆ ಇವರ್ಯಾರಿಗೂ ಕಾನೂನಿನ ಕಿಂಚಿತ್ತೂ ಸಹ ಭಯ ಇಲ್ಲದಿರುವುದು ತಿಳದು ಬರುತ್ತಿದೆ.

https://samasthanews.com/prajwal-devaraj-starrer-karavali-movie-poster-released/

ಬಂಧಿತರಾಗಿರಯವ ಎ1 ಇಂದ ಎ17 ಆರೋಪಿಗಳು ಎಲ್ಲರೂ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕೃತ್ಯ ಎಸಗಲು ಒಳಸಂಚು ರೂಪಿಸಿರುವುದು ಮತ್ತು ಕೃತ್ಯ ನಡೆದ ನಂತರ ಭೌತಿಕ ಮತ್ತು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ನಾಶಪಡಿಸಿರುವುದು ಮತ್ತು ನಾಶಪಡಿಸಲು ಪ್ರಯತ್ನಿಸಿರುವುದು ಪೊಲೀಸರ ತನಿಖೆಯಲ್ಲಿ ದೃಢಪಟ್ಟಿರುತ್ತದೆ.

ಪ್ರಕರಣದ ತನಿಖೆಯ ಹಂತದಲ್ಲಿ ವಶಪಡಿಸಿಕೊಳ್ಳಲಾಗಿರುವ ಹಾಗೂ ಪರಿಶೀಲನೆ ಮಾಡಲಾಗಿರುವ ಸಾಕ್ಷ್ಯಾಧಾರಗಳ ಪ್ರಕಾರ ಬಂಧಿತವಾಗಿರುವ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.

ಪ್ರಕರಣವು ತನಿಖೆಯ ಹಂತದಲ್ಲಿದ್ದು ಯಾವ ಆರೋಪಿಗಳು ಕೃತ್ಯದಲ್ಲಿ ಯಾವ ಪಾತ್ರ ನಿರ್ವಹಿಸಿದ್ದಾರೆ ಎಂಬುದನ್ನು ನಾವು ಪೂರ್ಣವಾಗಿ ತಿಳಿಯಬೇಕಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ. ಪ್ರಕರಣದಲ್ಲಿ ಈವರೆಗೆ 83 ಲಕ್ಷಕ್ಕಿಂತಲೂ ಹೆಚ್ಚಿನ ಹಣ ವಶಪಡಿಸಿಕೊಂಡಿದ್ದೇವೆ. ಆರೋಪಿಗಳಿಗೆ ಆ ಹಣ ನೀಡಿರುವ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿದೆ ಹಾಗೂ ಆ ಹಣದ ಮೂಲದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಬೇಕಾಗಿರುತ್ತದೆ.

ಪ್ರತ್ಯಕ್ಷ ಸಾಕ್ಷಿದಾರರಿಂದ ಎ8, ಎ-15 ಹಾಗೂ ಎ17 ಆರೋಪಿಗಳು ಸೇರಿದಂತೆ ಇತರೆ ಆರೋಪಿಗಳ ಗುರುತಿನ ಕವಾಯತನ್ನು ಕಾರ್ಯನಿರ್ವಾಹಕ ದಂಡಾಧಿಕಾರಿಗಳಿಂದ ನಡೆಸಬೇಕಾಗಿರುತ್ತದೆ. ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡದಲ್ಲಿ ಪ್ರಕರಣದ ತನಿಖೆಗೆ ಆಡಚಣೆ ಉಂಟಾಗುತ್ತದೆ.

ಪ್ರಕರಣದಲ್ಲಿ ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ್ದ ಹಾಗೂ ಸಾಕ್ಷ್ಯ ನಾಶಕ್ಕೆ ಉಪಯೋಗಿಸಿದ್ದ ಮತ್ತು ಮೃತದೇಹವನ್ನು ವಿಲೇವಾರಿ ಮಾಡಲು ಉಪಯೋಗಿಸಿದ್ದ ವಾಹನಗಳನ್ನು ಆರ್.ಟಿ.ಓ ಅಧಿಕಾರಿಗಳಿಂದ ಪರಿಶೀಲನೆ ಮಾಡಿಸಿ ಪರಿಶೀಲನಾ ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಹಾಗೂ ವಾಹನ ಮಾಲೀಕರುಗಳ ವಿವರಗಳನ್ನು ಪಡೆದುಕೊಂಡು ಮೂಲ ಮಾಲೀಕರುಗಳ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ.

ಪ್ರಕರಣದಲ್ಲಿ ಆರೋಪಿಗಳಿಗೆ ಸಂಬಂಧಿಸಿದ ಮೊಬೈಲ್‌ಗಳನ್ನು ರಿಟ್ರೇವ್ ಮಾಡಿಸಿ ಸಿ.ಎಪ್.ಎಸ್.ಎಲ್ ಹೈದ್ರಾಬಾದ್‌ಗೆ ಕಳುಹಿಸಿಕೊಟ್ಟಿದ್ದು ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳ ಹಾಗೂ ಸಾಕ್ಷಿದಾರರುಗಳ ಮೊಬೈಲ್ ಪೋನ್ ಗಳನ್ನು ರಿಟ್ರೀವ್ ಮಾಡಿಸಿ ಪರೀಕ್ಷೆಗಾಗಿ ಸಿ.ಎಪ್.ಎಸ್.ಎಲ್ ಗೆ ಕಳುಹಿಸಿಕೊಟ್ಟು ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಪ್ರಕರಣದಲ್ಲಿ ಅಮಾನತ್ತು ಪಡಿಸಿದ್ದ ಡಿ.ವಿ.ಆರ್‌ಗಳನ್ನು ರಿಟ್ರೇವ್ ಮಾಡಿಸಿ ನಂತರ ಆರೋಪಿಗಳ ನೇರವಾಗಿ
ಕೃತ್ಯದಲ್ಲಿ ಬಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಎಪ್.ಎಸ್.ಎಲ್ ಗೆ ಕಳುಹಿಸಿ ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ.

ಪ್ರಕರಣದಲ್ಲಿ ಆರೋಪಿಗಳು ಕೃತ್ಯಕ್ಕೆ ಮೊದಲು ಹಾಗೂ ಕೃತ್ಯದ ಸಮಯದಲ್ಲಿ ಹಾಗೂ ಕೃತ್ಯದ ನಂತರ ಹಲವಾರು ವ್ಯಕ್ತಿಗಳನ್ನು ಸಂಪರ್ಕಿಸಿದ್ದು ಸದರಿ ಸಾಕ್ಷಿದಾರರುಗಳನ್ನು ವಿಚಾರಣೆ ಮಾಡಿ ಸಾಕ್ಷ್ಯ ನಾಶದ ಬಗ್ಗೆ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಈ ಸಮಯದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ಸಾಕ್ಷ್ಯ, ನಾಶ ಮಾಡುವ ಸಾದ್ಯತೆ ಹೆಚ್ಚಾಗಿರುತ್ತದೆ.

ಪ್ರಕರಣದ ಆರೋಪಿಗಳು ಪ್ರಭಾವಿಗಳಾಗಿದ್ದು ಹಣಬಲ ಮತ್ತು ಜನ ಬಲ ಹೊಂದಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿರುತ್ತದೆ. ಈ ಸಮಯದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ತಮ್ಮ ಪ್ರಭಾವಗಳನ್ನು ಬಳಸಿ ಪ್ರಕರಣದ ಸಾಕ್ಷಿದಾರರುಗಳಿಗೆ ಬೆದರಿಕೆ ಹಾಕುವ ಮತ್ತು ವ್ಯವಸ್ಥಿತ ರೀತಿಯನ್ನು ಸಾಕ್ಷ್ಯನಾಶ ಪಡಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.

ಪ್ರಕರಣದಲ್ಲಿ ಕೆಲವು ಆರೋಪಿಗಳು ಬೇರೆಯವರ ಹೆಸರಿನಲ್ಲಿರುವ ಸಿಮ್ ಗಳನ್ನು ಉಪಯೋಗಿಸುತ್ತಿರುವುದು ಹಾಗೂ ಸಾಕ್ಷಿದಾರರುಗಳು ಸಹ ಬೇರೆಯವರ ಹೆಸರಿನಲ್ಲಿರುವ ಸಿಮ್ ಗಳನ್ನು ಉಪಯೋಗಿಸಿರುವುದು ತನಿಖೆಯಲ್ಲಿ ತಿಳಿದು ಬಂದಿದ್ದು ಮೂಲ ಸಿಮ್ ಮಾಲೀಕರುಗಳ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ.

ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿದಾರರುಗಳನ್ನು ವಿಚಾರಣೆ ಮಾಡಿ ಹೇಳಿಕೆಗಳನ್ನು ಹಾಗೂ ಕಲಂ 164 ಆಡಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿದ್ದು ಪ್ರಕರಣವು ತನಿಖಾ ಹಂತದಲ್ಲಿರುವುದರಿಂದ ಆರೋಪಿಗಳಿಗೆ ಈ ಹಂತದಲ್ಲಿ ಜಾಮೀನು ನೀಡಿದಲ್ಲಿ ಪ್ರಕರಣದ ತನಿಖೆಗೆ ಹಿನ್ನಡೆಯಾಗುವ ಹಾಗೂ ಆರೋಪಿಗಳು ವ್ಯವಸ್ಥಿತ ರೀತಿಯಲ್ಲಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ.

Exit mobile version