HD Kumarswamy
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರನ್ನು ಪತ್ರವೊಂದನ್ನು ಹಂದಿ ಎಂದು ಐಪಿಎಸ್ ಅಧಿಕಾರಿ ಚಂದ್ರಶೇಖರ್ ಕರೆದಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಅವರ ಹೇಳಿಕೆ ಒಂದಕ್ಕೆ ಸಂಬಂಧಿಸಿದಂತೆ ಚಂದ್ರಶೇಖರ್ ಬರೆದಿರುವ ಪತ್ರದಲ್ಲಿ ಬರ್ನಾರ್ಡ್ ಶಾ ಅವರ ಉಕ್ತಿಯೊಂದನ್ನು ಬಳಸುವ ಸಂದರ್ಭದಲ್ಲಿ ಕುಮಾರಸ್ವಾಮಿಗೆ ಹಂದಿ ಎಂದು ಸಂಭೋಧಿಸಲಾಗಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ವಾದಿಸುತ್ತಿದ್ದಾರೆ.
ಘಟನೆಯನ್ನು ಖಂಡಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ, ‘ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್ ಕಂಡಕ್ಟ್ ರೂಲ್ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ, ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಹೀಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ ಇದನ್ನು ಗಂಭೀರವಾಗಿ ಪರಿಗಣಿಸಲಿದೆ. ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಹೀಗೆ ಅಸಭ್ಯ ಭಾಷೆ ಬಳಸಿದವರಲ್ಲ. ಈ ಅಧಿಕಾರಿ ಬಗ್ಗೆಯೂ ಹಾಗೆಲ್ಲ ಏಕವಚನದಲ್ಲಿ ಮಾತನಾಡಿಲ್ಲ ಎಂದು ಜೋಶಿ ಸ್ಪಷ್ಟಪಡಿಸಿದರು.
ಇನ್ನು ತಮ್ಮ ವಿರುದ್ಧ ಹಂದಿ ಪದ ಬಳಸಿದ ಅಧಿಕಾರಿಯ ಜನ್ಮ ಜಾಲಾಡಿದ ಕುಮಾರಸ್ವಾಮಿ, ಚಂದ್ರಶೇಖರ್ ಅವರ ಹಳೆಯ ಕೇಸುಗಳನ್ನು, ಅವರಿಗೆ ಸಂಬಂಧಿಸಿದ ಆಸ್ತಿ ವಿವರವನ್ನು ಮಾಧ್ಯಮದ ಮುಂದಿಟ್ಟರು. ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ ಎಂದು ಎಚ್ಡಿಕೆ, ‘ಭೂ ವ್ಯವಹಾರವೊಂದರಲ್ಲಿ 20 ಕೋಟಿಗೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ ನೀವೇ ಅಲ್ಲವೇ..? ಈ ಸಂಬಂಧ ನಿಮ್ಮ ವಿರುದ್ಧ ಇನ್ಸ್ ಪೆಕ್ಟರ್ ಒಬ್ಬರು ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಿನಲ್ಲಿ ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹು ಮಹಡಿಯ ವಾಣಿಜ್ಯ ಕಟ್ಟಡವನ್ನು ಎಷ್ಟು ಕೋಟಿ ಲಂಚ ಪಡೆದು ಕಟ್ಟುತ್ತಿದ್ದೀರಿ ತಿಳಿಸುವಿರಾ? ಕೆರೆಯನ್ನು ಒತ್ತುವರಿ ಮಾಡಿಕೊಂಡಿರುವ ಅಕ್ರಮಗಳ ಬಗ್ಗೆಯೂ ತನಿಖೆ ನಡೆಯಬೇಕಲ್ಲವೇ..?’ ಎಂದು ಪ್ರಶ್ನೆ ಮಾಡಿದ್ದಾರೆ.
Google: ಕೆಲಸ ಬಿಟ್ಟಿದ್ದ ವ್ಯಕ್ತಿಗೆ 22 ಸಾವಿರ ಕೊಟ್ಟು ಮತ್ತೆ ಕಚೇರಿಗೆ ಕರೆತಂದ ಗೂಗಲ್
ಚಂದ್ರಶೇಖರ್ ಒಬ್ಬ ಭ್ರಷ್ಟ ಅಧಿಕಾರಿ, ಆತನ ಮೇಲೆ ಈಗಾಗಲೆ ಭ್ರಷ್ಟಾಚಾರ ಕೇಸು ದಾಖಲಾಗಿ ಆರೋಪ ಪಟ್ಟಿ ಸಹ ದಾಖಲಾಗಿದೆ. ಇಂಥಹಾ ವ್ಯಕ್ತಿಯಿಂದ ಪ್ರಮಾಣಿಕ ತನಿಖೆ ಹೇಗೆ ಸಾಧ್ಯ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.