Site icon Samastha News

Karnataka Airports:ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರು ಬದಲಿಸಲು ಮುಂದಾದ ರಾಜ್ಯ ಸರ್ಕಾರ

Karnataka Airports

Karnataka Airports

Karnataka Airports

ಹೆಸರು ಬದಲಾವಣೆ ರಾಜಕೀಯ ಉತ್ತರ ಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಅಲ್ಲಿ ಸಿಎಂ ಯೋಗಿ ಆದಿತ್ಯನಾಥ ಉತ್ತರ ಪ್ರದೇಶದ ರಾಜ್ಯದ ನಗರಗಳ ಹೆಸರು ಬದಲಾವಣೆ ಮಾಡುತ್ತಿದ್ದಾರೆ. ಕರ್ನಾಟದಲ್ಲಿ ಇದೀಗ ಸಿದ್ದರಾಮಯ್ಯ ಸರ್ಕಾರ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ರಾಜ್ಯದ ಹುಬ್ಬಳ್ಳಿ ವಿಮಾನ ನಿಲ್ದಾಣ, ಬೆಳಗಾವಿ ವಿಮಾನ ನಿಲ್ದಾಣ, ಹುಬ್ಬಳ್ಳಿ ವಿಮಾನ‌ ನಿಲ್ದಾಣ ಮತ್ತು ಶಿವಮೊಗ್ಗ ವಿಮಾನ‌ ನಿಲ್ದಾಣಗಳ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರವು ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಕಿತ್ತೂರು ಚೆನ್ನಮ್ಮ ವಿಮಾನ ನಿಲ್ದಾಣ, ಹುಬ್ಬಳ್ಳಿ-ಧಾರವಾಡ ವಿಮಾನ‌ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ನಿಲ್ದಾಣ, ವಿಜಯಪುರ ನಿಲ್ದಾಣಕ್ಕೆ ಜಗದ್ ಗುತು ಬಸವೇಶ್ವರ ವಿಮಾನ‌ ನಿಲ್ದಾಣ ಎಂದು ಹೆಸರಿಡುವಂತೆ ರಾಜ್ಯ ಸರ್ಕಾರವು ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ.

ಸಂಸತ್ ಅಧಿವೇಶನದಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಮಾನಯಾನ ಸಚಿವ ಮುರಳೀಧರ ಮೋಹಲ್, ಒಟ್ಟು ಹತ್ತು ರಾಜ್ಯಗಳು ತಮ್ಮ ರಾಜ್ಯದ ಕೆಲವು ವಿಮಾನ ನಿಲ್ದಾಣದ ಹೆಸರು ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಿವೆ. ಸಾಮಾನ್ಯವಾಗಿ ವಿಮಾನ‌ ನಿಲ್ದಾಣಗಳನ್ನು ಅವುಗಳ ಊರಿನ ಹೆಸರಿನಿಂದ ಕರೆಯಲಾಗುತ್ತದೆ. ಆದರೆ ಸರ್ಕಾರಗಳು ವಿಧಾನಸಭೆಯಲ್ಲಿ ರೆಸಲ್ಯೂಷನ್ ಮಾಡಿ ವಿಮಾನಯಾನಕ್ಕರ ಪ್ರಸ್ತಾವನೆ ಸಲ್ಲಿಸಿದರೆ ಹೆಸರು ಬದಲಾವಣೆ ಮಾಡಬಹುದು ಎಂದಿದ್ದಾರೆ.

Personal Finance: 25 ಸಾವಿರ ಸಂಬಳದವರು ಕೋಟ್ಯಧೀಶರಾಗಬಹುದು, ಹೇಗೆ?

ರಾಜ್ಯ ಸರ್ಕಾರವು ಕಳೆದ ಬೆಳಗಾವಿ ಅಧಿವೇಶನದಲ್ಲಿಯೇ ವಿಮಾನ‌ ನಿಲ್ದಾಣಗಳ ಹೆಸರು ಬದಲಾವಣೆಗೆ ರೆಸಲ್ಯೂಷನ್ ಮಾಡಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಕೇಂದ್ರ ವಿಮಾನಯಾನ ಸಚಿವಾಲಯವು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Exit mobile version