Breaking News: ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್, ಬಂಧನ ಸಾಧ್ಯತೆ

0
117
Breaking News

Breaking News

ಕನ್ನಡ ಚಿತ್ರರಂಗದ ಸಂಕಷ್ಟಗಳು ದೂರಾಗುವಂತೆ ಕಾಣುತ್ತಿಲ್ಲ. ಒಂದರ ಹಿಂದೆ ಒಂದರಂತೆ ಸಂಕಷ್ಟಗಳು ಚಿತ್ರರಂಗವನ್ನಜ ಸುತ್ತಿಕೊಳ್ಳುತ್ತಲೇ ಇವೆ. ಇತ್ತೀಚೆಗೆ ನಡೆಸಿರುವ ಪೂಜೆಯೂ ಸಹ ಫಲ ಕೊಟ್ಟಂತೆ ಕಾಣುತ್ತಿಲ್ಲ, ನಟ ದರ್ಶನ್ ಕೊಲೆ ಕೇಸಲ್ಲಿ ಜೈಲು ವಾಸ ಅನುಭವಿಸುತ್ತಿರುವಾಗಲೇ ಇತ್ತ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್’ಐಆರ್ ದಾಖಲಾಗಿದೆ.

ಮೂಲಗಳ ಪ್ರಕಾರ, ಯೋಗರಾಜ್ ಭಟ್ ನಿರ್ದೇಶನ ಮಾಡುತ್ತಿರುವ ‘ಮನದ ಕಡಲು’ ಸಿನಿಮಾದ ಶೂಟಿಂಗ್ ವೇಳೆ ನಡೆದಿರುವ ಅವಘಡದಲ್ಲಿ ವ್ಯಕ್ತಿಯೊಬ್ಬ ಬಿದ್ದು ಸಾವನ್ನಪ್ಪಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯೋಗರಾಜ್ ಭಟ್ ವಿರುದ್ಧವೂ ಎಫ್ ಐಆರ್ ದಾಖಲಾಗಿದೆ. ಬಂಧನದ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

‘ಮನದ ಕಡಲು’ ಸಿನಿಮಾದ ಶೂಟಿಂಗ್ ಹೊರವಲಯದಲ್ಲಿ ಮಾಡಲಾಗಿತ್ತು. ಈ ವೇಳೆ ಲೈಟ್ ಬಾಯ್ ಒಬ್ಬ ಲೈಟು ನಿರ್ವಹಣೆ ಮಾಡುವಾಗ 30 ಅಡಿ ಮೇಲಿನಿಂದ ಕೆಳಗೆ ಬಿದ್ದಿದ್ದಾನೆ. ಕೂಡಲೆ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆಯಾದರೂ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Darshan Thoogudeepa: ದರ್ಶನ್ ವಿರುದ್ಧ ಚಾರ್ಜ್ ಶೀಟ್: ಮಾಧ್ಯಮಗಳು ಹೇಳುತ್ತಿರುವುದು ಎಷ್ಟು ಸತ್ಯ?

ಘಟನೆ ಸಂಬಂಧ ಯೋಗರಾಜ್ ಭಟ್ ಮಾತ್ರವೇ ಅಲ್ಲದೆ ಆ ಸಿನಿಮಾದ ನಿರ್ದೇಶಕ ಹಾಗೂ ನಿರ್ವಾಹಕರ ಮೇಲೂ ಸಹ ಎಫ್’ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು ಆರೋಪಿಗಳ ಬಂಧನ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

LEAVE A REPLY

Please enter your comment!
Please enter your name here