Narendra Modi: ಮೊಹಮ್ಮದ್ ಶಮಿಯ ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

1
161
Narendra Modi
Modi-Shami

Narendra Modi

ಲೋಕಸಭೆ ಚುನಾವಣೆ ಪ್ರಚಾರ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತ ಸಂಚರಿಸುತ್ತಿದ್ದಾರೆ. ಇಂದು (ಏಪ್ರಿಲ್ 20) ಕರ್ನಾಟಕಕ್ಕೆ ಆಗಮಿಸಿದ್ದ ಮೋದಿ ಚಿಕ್ಕಬಳ್ಳಾಪುರ, ಬೆಂಗಳೂರುಗಳಲ್ಲಿ ರ್ಯಾಲಿಗಳಲ್ಲಿ ಭಾಗವಹಿಸಿ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು. ಕರ್ನಾಟಕಕ್ಕೆ ಬರುವ ಮುನ್ನ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಷಣ ಮಾಡಿದ ನರೇಂದ್ರ ಮೋದಿ ಕ್ರಿಕೆಟಿಗ ಮೊಹಮ್ಮದ್ ಶಮಿಯ ಗುಣಗಾನ ಮಾಡಿದ್ದಾರೆ.

ಉತ್ತರ ಪ್ರದೇಶದ ಅಮ್ರಾಹ್​ನಲ್ಲಿ ಆಯೋಜಿಸಿದ್ದ ಬೃಹತ್ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ಭಾಯಿ (ಅಣ್ಣ) ಮೊಹಮ್ಮದ್ ಶಮಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ತೋರಿದ ಅದ್ಭುತ ಪ್ರದರ್ಶನವನ್ನು ಇಡೀ ವಿಶ್ವವೇ ನೋಡಿದೆ. ಕೇಂದ್ರ ಸರ್ಕಾರವು ಮೊಹಮ್ಮದ್ ಶಮಿ ಅವರಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಎರಡು ಹೆಜ್ಜೆ ಮುಂದೆ ಹೋಗಿ ರಾಜ್ಯದ ಯುವ ಕ್ರೀಡಾಪಟುಗಳಿಗಾಗಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡುತ್ತಿದ್ದಾರೆ. ಅಮ್ರಾಹ್​ ನಲ್ಲಿ ಕ್ರೀಡಾಂಗಣ ನಿರ್ಮಾಣವಾಗುತ್ತಿರುವುದಕ್ಕೆ ನಾನು ಇಲ್ಲಿಯ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದರು.

ಕರ್ನಾಟಕಕ್ಕೆ ಬರಲಿರುವ ಮೋದಿಗೆ ಸಚಿವ ಕೃಷ್ಣಭೈರೇಗೌಡ ಪ್ರಶ್ನೆಗಳು

ಕಳೆದ ವಿಶ್ವಕಪ್​ನಲ್ಲಿ ಮೊಹಮ್ಮದ್ ಶಮಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದರು. ಟೂರ್ನಿಮೆಂಟ್​ನ ಅತ್ಯುತ್ತಮ ಬೌಲರ್ ಎನಿಸಿಕೊಂಡಿದ್ದರು. ಫೈನಲ್​ನಲ್ಲಿ ಸೋತ ಬಳಿಕ ಮೋದಿ, ಭಾರತೀಯ ಕ್ರಿಕೆಟ್ ತಂಡದ ಆಟಗಾರರನ್ನು ಭೇಟಿ ಆದಾಗ ಶಮಿ, ಮೋದಿಯ ಎದೆಗೆ ಒರಗಿ ಕಣ್ಣೀರು ಹಾಕಿದ್ದರು. ಆ ವಿಡಿಯೋ ಸಖತ್ ವೈರಲ್ ಆಗಿತ್ತು. ಸೋತು ಬೇಸರದಲ್ಲಿದ್ದ ಆಟಗಾರರನ್ನು ಹುರಿದುಂಬಿಸಲು ಮೋದಿ ಮಾಡಿದ ಪ್ರಯತ್ನವನ್ನು ಆ ನಂತರ ಶಮಿ ಕೊಂಡಾಡಿದ್ದರು. ಮೊಹಮ್ಮದ್ ಶಮಿ ಪ್ರಸ್ತುತ ಗಾಯಾಳುವಾಗಿದ್ದು, ಐಪಿಎಲ್​ನಿಂದ ಹೊರಗುಳಿದಿದ್ದಾರೆ.

ಅಮ್ರಾಹ್​ನ ಕೆಲವು ಐತಿಹಾಸಿಕ ಪುರುಷರನ್ನು ಸಹ ನೆನೆದ ಮೋದಿ, ಅಮ್ರಾಹ್​ನ ಡೋಲಕ್​ಗಳ ಬಗ್ಗೆಯೂ ಮಾತನಾಡಿದರು. ಏಪ್ರಿಲ್ 26ರಂದು ಉತ್ತರ ಪ್ರದೇಶದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಅಮ್ರೋಹ್, ಮೀರಟ್, ಗಾಜಿಯಾಬಾದ್, ಗೌತಮಬುದ್ಧ ನಗರ, ಭುಲಂದ್​ಶೇರ್, ಅಲಿಘಡ, ಮಥುರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

1 COMMENT

LEAVE A REPLY

Please enter your comment!
Please enter your name here