Fashion: ಉಚಿತ ಫ್ಯಾಷನ್ ಡಿಸೈನ್ ಕೋರ್ಸ್, ಆಸಕ್ತರು ಅರ್ಜಿ ಸಲ್ಲಿಸಿ

0
123
RUDSET

Fashion

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್’ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 10 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

UP Police: ಪೆನ್ಸಿಲ್, ರಬ್ಬರ್ ಕಳ್ಳತನ, ಪ್ರಕಣ ಇತ್ಯರ್ಥ ಪಡಿಸಿದ ಪೊಲೀಸರು

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here