Veerappa Moily
ಮಾಜಿ ಸಿಎಂ, ಸಂಸದ, ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಇಂದು (ಜೂನ್ 30) ನಿಧನ ಹೊಂದಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೊಯ್ಲಿ ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.
ಹಂಸ ಮೊಯ್ಲಿ ಅವರು ಕಲಾವಿದೆಯಾಗಿ ಗುರುತಿಸಿಕೊಂಡಿದ್ದರು. ಭರತನಾಟ್ಯ ಕಲಾವಿದೆಯಾಗಿದ್ದ ಹಂಸ ಮೊಯ್ಲಿ, ನೃತ್ಯ ಸಂಯೋಜಕಿಯಾಗಿ ಹೆಸರುವಾಸಿಯಾಗಿದ್ದರು. ಅದು ಮಾತ್ರವೇ ಅಲ್ಲದೆ ಭರತ ನಾಟ್ಯ ಕುರಿತಾದ ಕತೆ ಹೊಂದಿದ್ದ ತಮಿಳಿನ ಸಿನಿಮಾ ‘ಶೃಂಗಾರಂ’ನಲ್ಲಿ ನಟಿಸಿ ನಟಿಯೂ ಸಹ ಎನಿಸಿಕೊಂಡಿದ್ದರು.
ಛತ್ತೀಸ್ಘಡದಲ್ಲಿದ್ದ ವೀರಪ್ಪ ಮೊಯ್ಲಿ ಅವರು ಪುತ್ರಿಯ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿಗೆ ಬಂದಿದ್ದಾರೆ. ಜುಲೈ 1 ರಂದು ಅವರ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ.